ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಯೂಟ್ಯೂಬ್ ಚಾನೆಲ್’ ಆರಂಭಕ್ಕೆ ಲೈಸೆನ್ಸ್’ ಕಡ್ಡಾಯಗೊಳಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಅನ್ನು ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ. ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿಹಿಡಿಯಲು ನಮ್ಮ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ. ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ. ಈ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.