28 October 2025 | Join group

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕಟ್ಟಿ ಹಾಕಿ ಅಪಾರ ನಗದು, ಚಿನ್ನ ಲೂಟಿ

  • 17 Sep 2025 08:51:56 AM

ವಿಜಯಪುರ: . ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣದಲ್ಲಿ ಎಸ್.ಬಿ.ಐ. ಬ್ಯಾಂಕ್ ನಲ್ಲಿ ನಡೆದಿದೆ.

 

ಮ್ಯಾನೇಜರ್, ಕ್ಯಾಷಿಯರ್ ಸೇರಿ ಬ್ಯಾಂಕ್ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ. ದರೋಡೆಕೋರರು ಅಪಾರ ನಗದು, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ. 8 ಕೋಟಿ ರೂ. ನಗದು ಮತ್ತು 50 ಕೆ.ಜಿ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.

 

ಪಿಸ್ತೂಲು, ಮಾರಕಾಸ್ತ್ರಗಳೊಂದಿಗೆ ಮುಖಕ್ಕೆ ಮುಸುಕು ಧರಿಸಿ ಬಂದಿದ್ದ ದರೋಡೆಕೋರರು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಯನ್ನು ಬೆದರಿಸಿ ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.