28 October 2025 | Join group

ಬಂಗ್ಲೆಗುಡ್ಡೆ ಸ್ಥಳ ಮಹಜರಿಗೆ ಅರಣ್ಯ ಇಲಾಖೆಯ ಹಸಿರು ನಿಶಾನೆ: ಎಸ್‌ಐಟಿ ತಯಾರಿ

  • 17 Sep 2025 09:56:02 AM

ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿನ್ನೆಲೆ, ಸ್ಥಳ ಮಹಜರು ನಡೆಸಲು ಎಸ್‌ಐಟಿಗೆ ಅರಣ್ಯ ಇಲಾಖೆ ಅನುಮತಿ ನೀಡಿದೆ.

 

ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಇಂದು ಮಹಜರು ನಡೆಯಲಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಲಿದ್ದು, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ತಂಡ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಹಾಜರಾಗುವಂತೆ ಸೂಚಿಸಲಾಗಿದೆ.