ಬೆಂಗಳೂರು: ಅನುದಾನಿತ ಮತ್ತು ಸರಕಾರಿ ಶಾಲೆಗಳಿಗೆ ಸಮಾನ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ಹೆಚ್ಚಿನ ಶಿಕ್ಷಕರನ್ನು ನೇಮಕಾತಿ ಮಾಡಲು ಸರಕಾರ ನಿರ್ಧರಿಸಿದೆ.
ಶೀಘ್ರದಲ್ಲೇ 18,500 ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು 13,500 ಶಿಕ್ಷಕರ ನೇಮಕಾತಿ ಮಾಡಲಾಗಿದೆ. ನಮ್ಮ ಸರಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಬದ್ದವಾಗಿದೆ ಎಂದು ಚಾಮರಾಜನಗರದಲ್ಲಿ ಹೇಳಿದ್ದಾರೆ.
ಮಕ್ಕಳ ಕೊರತೆಯಿಂದ ಈಗಾಗಲೇ ಹಲವಾರು ಸರಕಾರಿ ಶಾಲೆಗಳು ಮುಚ್ಚಲಾಗಿದ್ದು, ಮತ್ತಷ್ಟು ಶಾಲೆಗಳು ಮುಚ್ಚುವ ಪರಿಸ್ಥಿತಿಯಲ್ಲಿದೆ ಎಂಬುವುದನ್ನು ಗಮನಿಸಬೇಕಾದ ಸಂಗತಿ.





