28 October 2025 | Join group

ಭಾರತದ ಹ್ಯಾಟ್ರಿಕ್ ಪ್ರಧಾನಿ ನರೇಂದ್ರ ಮೋದಿಗೆ 75ನೇ ಹುಟ್ಟು ಹಬ್ಬದ ಸಂಭ್ರಮ: ಶುಭ ಹಾರೈಕೆಗಳ ಸುರಿಮಳೆ

  • 17 Sep 2025 10:40:39 AM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತಮ್ಮ 75ನೇ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ದೇಶ–ವಿದೇಶಗಳ ಮಹಾನ್ ನಾಯಕರು ಸೇರಿದಂತೆ ಅನೇಕರು ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.

 

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ #ModiAt75 ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಶುಭಾಶಯಗಳಿಂದ ತುಂಬಿ ತುಳುಕುತ್ತಿವೆ ಮತ್ತು ಇದೀಗ ಟ್ರೆಂಡಿಂಗ್ ಪಟ್ಟಿಗಳಲ್ಲಿ ಅಗ್ರಸ್ಥಾನದಲ್ಲಿದೆ.

 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಪೋಸ್ಟ್ ಮಾಡಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಮತ್ತು ಉತ್ತಮ ಆರೋಗ್ಯ" ಎಂದು ಬರೆದಿದ್ದಾರೆ.

 

ರಾಷ್ಟ್ರಪತಿ ದ್ರೌಪದಿ ಮುರ್ಮು "ಇಂದು, ಜಾಗತಿಕ ಸಮುದಾಯವು ನಿಮ್ಮ ಮಾರ್ಗದರ್ಶನದಲ್ಲಿ ತನ್ನ ನಂಬಿಕೆಯನ್ನು ವ್ಯಕ್ತಪಡಿಸುತ್ತಿದೆ. ನೀವು ಎಂದೆಂದಿಗೂ ಆರೋಗ್ಯವಾಗಿ ಮತ್ತು ಸಂತೋಷದಿಂದ ಇರಬೇಕೆಂದು ಮತ್ತು ನಿಮ್ಮ ವಿಶಿಷ್ಟ ನಾಯಕತ್ವದಿಂದ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಬೇಕೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ 75 ನೇ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದರು.

 

ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಮಾತುಕತೆ ನಡೆದ ಕೆಲವು ಗಂಟೆಗಳ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ತಿಳಿಸುವುದರ ಜೊತೆಗೆ ರಷ್ಯಾ-ಉಕ್ರೇನ್ ಸಂಘರ್ಷದ ಬಗ್ಗೆ ಕೂಡ ಚರ್ಚೆ ನಡೆಸಿದ್ದಾರೆ.