ಮಂಗಳೂರು: ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿ ಅರೋಗ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಇಡಿ ನೋಟಿಸ್ ನೀಡಿದೆ.
ಜಮೀರ್ ಗೆ 2.5 ಕೋಟಿ ಸಾಲ ನೀಡಿದ್ದ ರಾಧಿಕಾ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರು ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ದಿನೇಶ್ ಗುಂಡೂರಾವ್ ಅವರಿಗೆ ಲೋಕಾಯುಕ್ತ ನೋಟೀಸ್ ಜಾರಿಗೊಳಿಸಿದ್ದು ಬಹಳ ಕುತೂಹಲಕ್ಕೆ ಕಾರಣವಾಗಿದೆ.
ಸಚಿವ ಜಮೀರ್ ಜೊತೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿದ್ದ ಸಚಿವ ಗುಂಡೂರಾವ್ ರವರಿಗೆ , ದಾಖಲೆ ಸಮೇತ ವಿಚಾರಣೆಗೆ ಹಾಜರಾಗಬೇಕಾಗಿ ತಿಳಿಸಲಾಗಿದೆ.





