ಧರ್ಮಸ್ಥಳ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್ ಐಟಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ದ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಿದ್ದರು.
ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಪತ್ತೆಯಾದ ಮೂಳೆಗಳನ್ನು ವಶಕ್ಕೆ ಪಡೆದ ಎಸ್ ಐ ಟಿ ಬ್ಯಾಗ್ ನಲ್ಲಿ ತುಂಬಿಕೊಂಡು ಹೋಗಿದೆ.
ಬಂಗ್ಲೆಗುಡ್ಡ ಕಾಡಿನಲ್ಲಿ ಎಸ್ ಐ ಟಿ ಶೋಧ ನಡೆಸುವಾಗ ಮೂಳೆಗಳು ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಠಲಗೌಡನ ಕರೆತರದೇ ಎಸ್ ಐ ಟಿ ಶೋಧ ನಡೆಸುತ್ತಿದ್ದು, ಎಸ್ ಐ ಟಿ ನಡೆ ಬಹಳ ಕುತೂಹಲ ಮೂಡಿಸಿದೆ. ಅಲ್ಲಿ ಸಿಕ್ಕಿರುವ ಮೂಳೆ ಹಾಗೂ ಬಟ್ಟೆಗಳನ್ನು ಎಸ್ ಐ ಟಿ ವಶಕ್ಕೆ ಪಡೆದಿದೆ.





