ರಾಜ್ಯದಾದ್ಯಂತ ಮತ್ತೆ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು ಹೊರತು ಪಡಿಸಿ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಿದೆ ಹವಾಮಾನ ಇಲಾಖೆ. ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.
ಭಾರತ ಹವಾಮಾನ ಇಲಾಖೆ ಇಂದು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ನೀಡಿದೆ.





