ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಬಂಗ್ಲೆಗುಡ್ಡ ಕಾಡಿಗೆ ಎಂಟ್ರಿ ಕೊಟ್ಟ ಅರ್ಧಗಂಟೆಯಲ್ಲೇ ಮೂಳೆಗಳು ಪತ್ತೆಯಾಗಿದೆ ಎನ್ನಲಾಗುತ್ತಿದೆ.
ಎಸ್ಐಟಿ ಶೋಧದ ವೇಳೆ ಐವರು ಮಾನವರ ಮೂಳೆಗಳ ಅವಶೇಷ ಹಾಗೂ ಕೆಲ ಬಟ್ಟೆಯ ತುಂಡುಗಳು ಸಿಕ್ಕಿದ್ದು, ಅವುಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ.
ಅಸ್ಥಿಪಂಜರದ ಪಕ್ಕದಲ್ಲೇ ಹಿರಿಯ ನಾಗರಿಕರ ಕಾರ್ಡ್ ಪತ್ತೆಯಾಗಿದೆ. ಅಲ್ಲದೇ ಮರದಲ್ಲಿ ಎರಡು ಹಗ್ಗ ಮತ್ತು ಒಂದು ಸೀರೆ ಸಿಕ್ಕಿದ್ದು ನೇಣುಬಿಗಿದ ಅನುಮಾನ ವ್ಯಕ್ತವಾಗಿದೆ.
13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ.





