ಮಂಗಳೂರು: ಧರ್ಮಸ್ಥಳದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುವ ಹೆಣ ಹೂತು ಹಾಕಿದ ತನಿಖೆಯು ದಿನದಿಂದ ದಿನಕ್ಕೆ ಹೊಸ ತಿರುವನ್ನು ನೀಡುತ್ತಿದೆ. ಈಗಾಗಲೇ ಬುರುಡೆ ಪ್ರಕರಣದಲ್ಲಿ ಎಸ್ಐಟಿ ತಂಡದಿಂದ ಗ್ರಿಲ್ ಮಾಡಲಾಗಿದ್ದ ಚಿನ್ನಯ್ಯ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಮಧ್ಯೆ ನಡೆದ ಸಂಭಾಷಣೆಯ ರೆಕಾರ್ಡಿಂಗ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬಹಳ ಚರ್ಚೆಗೆ ಗ್ರಾಸವಾಗಿದೆ.
ಇದರ ಬೆನ್ನಲ್ಲೇ ಸೌಜನ್ಯ ಪ್ರಕರಣಕ್ಕೂ ಹೊಸ ತಿರುವು ಸಿಗುವ ಸಾಧ್ಯತೆ ಹೆಚ್ಚಾಗಿದೆ. ಸೌಜನ್ಯ ಹತ್ಯೆ ಮುನ್ನ ಅಪಹರಣದ ಪ್ರಕರಣದ ಸಾಕ್ಷಿ ಎನ್ನಲಾದ ಮಹಿಳೆಯೊಬ್ಬರನ್ನು ಎಸ್ಐಟಿ ತಂಡ ವಿಚಾರಣೆ ನಡೆಸಿದೆ ಎನ್ನಲಾಗಿದೆ.
ಸೆ.19 ರಂದು ಎಸ್ಐಟಿ ಕಚೇರಿಗೆ ಆಗಮಿಸಿದ ಸಾಕ್ಷಿ ಎನ್ನಲಾದ ಮಹಿಳೆಯನ್ನು ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿಯಿದೆ.
ಈ ವಿಚಾರಣೆ ಸಂದರ್ಭದಲ್ಲಿ ಎಸ್ಐಟಿಯ ಕೆಲ ಅಧಿಕಾರಿಗಳ ವರ್ತನೆ ಬಗ್ಗೆ ಕೂಡ ಆ ಮಹಿಳೆ ಬೇಸರ ವ್ಯಕ್ತಪಡಿಸಿದ್ದು, ಎಸ್ಐಟಿ ಮುಖ್ಯಸ್ಥರಾದ ಪ್ರಣಬ್ ಮೊಹಂತಿ ಯವರಿಗೆ ದೂರು ಕೂಡ ನೀಡಿದ್ದಾರೆ ಎನ್ನಲಾಗಿದೆ.





