ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಚಿನ್ನದ ಬೆಲೆ ಇಳಿಕೆಗೆ ಬಹುದಿನಗಳಿಂದ ಕಾಯುತ್ತಿದ್ದ ಆಭರಣ ಪ್ರಿಯರಿಗೆ ಬಂಪರ್ ಗುಡ್‌ನ್ಯೂಸ್ ಸಿಕ್ಕಿದೆ. ಸಾಲು ಸಾಲು ಹಬ್ಬಗಳ ಸಮಯದಲ್ಲೇ ಬಂಗಾರದ ಬೆಲೆ ಭಾರೀ ಇಳಿಕೆಯಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,04,800 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,14,330 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,900 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,04,800 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 13,900 ರೂಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 24ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,537 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,575 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 8,653 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 140 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,537 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,575 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 140 ರೂ.





