ನವದೆಹಲಿ: ಮತದಾರರ ಹೆಸರು ಸೇರ್ಪಡೆ ಮತ್ತು ರದ್ಧತಿಗೆ ಆಧಾರ್ ದೃಢೀಕೃತ ಮೊಬೈಲ್ ಸಂಖ್ಯೆ ಮೂಲಕ ಇ- ದೃಢೀಕರಣ ವ್ಯವಸ್ಥೆಯನ್ನು ಕೇಂದ್ರ ಚುನಾವಣಾ ಆಯೋಗ ಕಡ್ಡಾಯ ಮಾಡಿದೆ.
ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಕೆಲ ಮತದಾರರ ಹೆಸರನ್ನು ಅಕ್ರಮವಾಗಿ ಮತಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಇದರ ನಡುವೆಯೇ ಸಮಸ್ಯೆ ಪರಿಹಾರಕ್ಕೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.
ಮತದಾರರ ಹೆಸರು ಸೇರ್ಪಡೆ ಮತ್ತು ತೆಗೆಸಲು ಇ- ಪರಿಶೀಲನೆ, ಇ- ದೃಢೀಕರಣ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆಧಾರ್ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ಮತದಾರರು ನೀಡುವುದು ಕಡ್ಡಾಯವಾಗಿದೆ. ಕಳೆದ ವಾರವೇ ಈ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.





