ಮೂಲ: ಕಂಪದಕೋಡಿ ವೆದರ್ ರಿಪೋರ್ಟ್ | ಪ್ರಕಟಣೆ: ಸುಧಾವಾಣಿ ವೆದರ್ ಡೆಸ್ಕ್
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ನಿನ್ನೆ ಸಾಧಾರಣ ಮಳೆಯಾಗಿದೆ.
ಇವತ್ತಿನ ಮುನ್ಸೂಚನೆ ಪ್ರಕಾರ ಕಾಸರಗೋಡು ದ.ಕ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ವಾಯುಭಾರಕುಸಿತದ ಪ್ರಭಾವದಿಂದ ಹಗಲು ಮೋಡದ ವಾತಾವರಣ ಇರಲಿದ್ದು ಆಗಾಗ ಸಣ್ಣ ಮಳೆಗಳು ಮುಂದುವರೆಯಬಹುದು. ಕಾಸರಗೋಡು ಜಿಲ್ಲೆ ಮತ್ತು ದ.ಕ.ದ ಎಲ್ಲಾ ತಾಲ್ಲೂಕುಗಳಲ್ಲಿ ಮಳೆ ಮುನ್ಸೂಚನೆ ಇದೆ.ಸೋಮವಾರದಿಂದ ಮಳೆ ಪ್ರಮಾಣ ಕಡಿಮೆ ಆಗಲಿದ್ದು ಅಕ್ಟೋಬರ್ 4 ರಿಂದ ಮುಂಗಾರು ಮಳೆ ಬಹುತೇಕ ಕಡಿಮೆ ಆಗಬಹುದು.
ಬಂಗಾಳಕೊಲ್ಲಿಯ ವಾಯುಭಾರಕುಸಿತವು ಆಂಧ್ರಪ್ರದೇಶದಲ್ಲಿದ್ದು ಮಧ್ಯಪ್ರದೇಶ ಮಹಾರಾಷ್ಟ್ರ ಮೂಲಕ ಸೆ 29 ಕ್ಕೆ ಅರಬ್ಬೀಸಮುದ್ರ ತಲುಪಿ ಪಶ್ಚಿಮ ದಿಕ್ಕಿನಲ್ಲಿ ಚಲಿಸುತ್ತಿದ್ದಂತೆ ಕರಾವಳಿಯಲ್ಲಿ ಮಳೆ ಕಡಿಮೆ ಆಗಲಿದೆ.





