24 October 2025 | Join group

ಮಹೇಶ್ ತಿಮರೋಡಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

  • 30 Sep 2025 03:05:50 PM

ಬೆಂಗಳೂರು: ಹೋರಾಟಗಾರ ಮಹೇಶ್ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

 

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿರುವುದನ್ನು ಪ್ರಶ್ನಿಸಿ ಮಹೇಶ್ ತಿಮರೋಡಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಹೇಶ್ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ. ಸಧ್ಯಕ್ಕೆ ಗಡಿಪಾರು ಆದೇಶ ಜಾರಿಗೆ ತರದಂತೆ ಸೂಚಿಸಿದೆ.

 

ಅಕ್ಟೋಬರ್ 8ರವರೆಗೆ ಮಹೇಶ್ ತಿಮರೋಡಿ ವಿರುದ್ಧ ಗಡಿಪಾರು ಆದೇಶ ಕೈಗೊಳ್ಳದಂತೆ ಹೈಕೋರ್ಟ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮಹೇಶ್ ತಿಮರೋಡಿಗೆ ಕೊಂಚ ರಿಲೀಫ್ ಸಿಕ್ಕಿದೆ.