24 October 2025 | Join group

ಸಮೀರ್ ಸೇರಿದಂತೆ ಐವರು ಯೂಟ್ಯೂಬರ್ ಗಳಿಗೆ ಮತ್ತೆ SIT ನೋಟಿಸ್

  • 03 Oct 2025 10:13:13 AM

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಮಾಡಿದ್ದ ಯೂಟ್ಯೂಬರ್ ಗಳಿಗೆ ಸಂಕಷ್ಟದ ಮೇಲೆ ಸಂಕಷ್ಟ ಶುರುವಾಗಿದೆ. ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಮತ್ತೆ ನೋಟಿಸ್ ಜಾರಿ ಮಾಡಿದ್ದಾರೆ.

 

ಯೂಟ್ಯೂಬರ್ ಗಳಾದ ಸಮೀರ್ ಎಂ.ಡಿ.ಸೇರಿದಂತೆ ಐವರು ಯೂಟ್ಯುಬರ್ ಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಇಂದು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದು, ಇಂದು ಐವರು ಯೂಟ್ಯೂಬರ್ ಗಳು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

 

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಟಿಟ್ಟಿರುವುದಾಗಿ ಹೇಳಿದ್ದ ಆರೋಪಿ ಚಿನ್ನಯ್ಯ ಹೇಳಿಕೆ ಆಧರಿಸಿ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಪ್ರಶ್ನಾವಳಿಗಳೊಂದಿಗೆ ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ.