24 October 2025 | Join group

ಮಹೇಶ್ ತಿಮರೋಡಿ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

  • 04 Oct 2025 09:25:00 PM

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ತಿಮರೋಡಿ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ.

 

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪದಲ್ಲಿ ಮಹೇಶ್ ತಿಮರೋಡಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಬಂಧನ ಭೀತಿಯಲ್ಲಿರುವ ತಿಮರೋಡಿ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್, ವಾದ-ಪ್ರತಿವಾದವನ್ನು ಆಲಿಸಿದೆ.

 

ಜಾಮೀನು ಅರ್ಜಿ ಕುರಿತ ತೀರ್ಪನ್ನು ಅಕ್ಟೋಬರ್ 9ಕ್ಕೆ ನಿಗದಿಗೊಳಿಸಿ ಆದೇಶ ಕಾಯ್ದಿರಿಸಿದೆ.