ಡಾರ್ಜಿಲಿಂಗ್: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತಗಳು ಮತ್ತು ಸೇತುವೆ ಕುಸಿತದಿಂದ ಕನಿಷ್ಠ 14 ಜನರು ಸಾವನ್ನಪ್ಪಿದ್ದು, ಹಲವರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಎಚ್ಚರಿಸಲಾಗಿದೆ.
ಭೂಕುಸಿತಗಳಿಂದಾಗಿ ಹಲವಾರು ಮನೆಗಳು, ಸೇತುವೆಗಳು, ರಸ್ತೆಗಳನ್ನು ಹಾಳಾಗಿವೆ, ಇದರಿಂದ ದೈನಂದಿನ ಜೀವನದಲ್ಲಿ ತೀವ್ರ ವ್ಯತ್ಯಯವಾಗಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ತೀವ್ರಗೊಳ್ಳುತ್ತಿದ್ದು, ಅಧಿಕಾರಿಗಳು ಮುಂದಿನ ಭೂಕುಸಿತಗಳನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಂಡಿದ್ದಾರೆ.





