24 October 2025 | Join group

ಸಚಿವ ಕೆ.ಜೆ ಜಾರ್ಜ್ ಆಪ್ತ ಸಹಾಯಕ ಲಂಚ ಸ್ವೀಕರಿಸುವ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

  • 06 Oct 2025 12:06:11 AM

ಬೆಂಗಳೂರು: ಕರ್ನಾಟಕ ರಾಜ್ಯದ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರ ಆಪ್ತ ಸಹಾಯಕ ಜ್ಯೋತಿ ಪ್ರಕಾಶ್ ಲಂಚ ಸ್ವೀಕರಿಸುವ ವೇಳೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

 

ವಿದ್ಯುತ್ ಸಂಪರ್ಕಕ್ಕಾಗಿ ನಿರಾಕ್ಷೇಪಣಾ ಪ್ರಮಾಣಪತ್ರ (NOC) ನೀಡುವ ವೇಳೆ, ವ್ಯಕ್ತಿಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಜ್ಯೋತಿ ಪ್ರಕಾಶ್ ಅವರನ್ನು ಬಂಧಿಸಿದ್ದಾರೆ.

 

ಡ್ರೈವರ್ ನವೀನ್ ಮೂಲಕ ಲಂಚ ಸ್ವೀಕರಿಸುತ್ತಿದ್ದ ಜ್ಯೋತಿ ಪ್ರಕಾಶ್ ಮುಂಗಡ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.