ಬೆಂಗಳೂರು: ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾದ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿದ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಅವರು ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿದ ಹೇಳಿಕೆಯಲ್ಲಿ, “ಮುಖ್ಯನ್ಯಾಯಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿದ ಗವಾಯಿ ಅವರು ಸಾಧನೆ ಮತ್ತು ಅರ್ಹತೆಯಿಂದ ಉನ್ನತ ಹುದ್ದೆಗೆ ಏರಿರುವುದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, “ಜಾತಿ ಆಧಾರಿತ ಅಸಹನೆ ಮತ್ತು ಮನುವಾದಿ ಮನಸ್ಸುಗಳು ಇನ್ನೂ ಸಮಾಜದಲ್ಲಿ ಜೀವಂತವಾಗಿವೆ” ಎಂದು ಹೇಳಿದ್ದಾರೆ.
ಅವರು ಮುಂದುವರೆದು, “ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜನರು ಗವಾಯಿ ಅವರ ಬೆಂಬಲದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.