24 October 2025 | Join group

ರಾಜ್ಯದ ಎಲ್ಲಾ ಅನುದಾನಿತ, ಸರ್ಕಾರಿ ಶಾಲೆಗಳಿಗೆ ಅ. 18 ರವರೆಗೆ ‘ದಸರಾ ರಜೆ’ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

  • 07 Oct 2025 03:53:03 PM

ಬೆಂಗಳೂರು : ಅಕ್ಟೋಬರ್ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ವಿಸ್ತರಣೆ ಮಾಡಲಾಗಿದೆ.

 

ದಸರಾ ರಜೆ ವಿಸ್ತರಣೆ ಮಾಡಬೇಕೆಂದು ರಾಜ್ಯ ಸರ್ಕಾರಿ ಶಿಕ್ಷಕರ ಸಂಘ ಮನವಿ ಮಾಡಿತ್ತು, ಈ ಹಿನ್ನೆಲೆ ಸರ್ಕಾರ ರಜೆ ವಿಸ್ತರಿಸಿ ಆದೇಶ ಹೊರಡಿಸಿದೆ.

 

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವು ಕಡೆ ಸಮೀಕ್ಷೆ ಪೂರ್ಣವಾಗಿಲ್ಲ. ಶಿಕ್ಷಕರನ್ನು ಸಂಪೂರ್ಣವಾಗಿ ಸಮೀಕ್ಷೆಗೆ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಎಲ್ಲಾ ಶಾಲೆಗಳಿಗೆ ಅ.18 ರವರೆಗೆ ದಸರಾ ರಜೆ ವಿಸ್ತರಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.