23 October 2025 | Join group

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ..!

  • 08 Oct 2025 10:37:20 AM

ಕೊಪ್ಪಳ: ಜಿಲ್ಲೆಯ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್(31) ಎಂಬವರನ್ನು ನಿನ್ನೆ ಮಂಗಳವಾರ ರಾತ್ರಿ ಮಧ್ಯರಾತ್ರಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.

 

ಸುಮಾರು ಏಳೆಂಟು ಜನರ ಗುಂಪು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದು ವೆಂಕಟೇಶ್ ಅವರಿಗೆ ಹಿಗ್ಗಾಮುಗ್ಗ ತಲುವಾರಗಳಿಂದ ಬಡಿದು ಕೊಂದಿದ್ದಾರೆ.

 

ರಾತ್ರಿ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ವೆಂಕಟೇಶ್ ಜೊತೆಗಿದ್ದ ಸ್ನೇಹಿತರುಗಳನ್ನು ಬೆದರಿಸಿ ಓಡಿಸಿದ್ದಾರೆ ಎನ್ನಲಾಗಿದೆ. 

 

ಹಳೆ ದ್ವೇಷದ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಕಂಡು ಬಂದಿದೆ, ಘಟನಾಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್. ಎಲ್ ಅರಿಸಿದ್ಧಿ, ಶ್ವಾನದಳ ಹಾಗೂ ಬೆರಳಚ್ಚು ತಂಡದವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ ಮತ್ತು ತನಿಖೆ ಮುಂದುವರಿದಿದೆ.