ಮಂಗಳೂರು: ಕಾಸರಗೋಡಿನ ತಲಪ್ಪಾಡಿಯಿಂದ ಚೆಂಗಳವರೆಗಿನ ರಾಷ್ಟ್ರೀಯ ಹೆದ್ದಾರಿ–66 ರ ಮೊದಲ ಆರು ಪಥದ ರಸ್ತೆಯ ಕಾಮಗಾರಿಯನ್ನು ಪೂರ್ಣಗೊಳಿಸಿ, ಯುಎಲ್‌ಸಿಸಿಎಸ್ ಕಂಪನಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತವಾಗಿ ಹಸ್ತಾಂತರಿಸಲಾಗಿದೆ.
ಈ ಯೋಜನೆಯು ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಸಂಪರ್ಕಕ್ಕೆ ಮಹತ್ವದ ಬದಲಾವಣೆಯನ್ನು ತಂದಿದ್ದು, ಮಂಗಳೂರು–ಕಾಸರಗೋಡು ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ಈಗ ಮಂಗಳೂರುನಿಂದ ಕಾಸರಗೋಡು ವರೆಗೆ ಕೇವಲ 35 ನಿಮಿಷಗಳಲ್ಲಿ ತಲುಪಬಹುದು ಎಂದು ತಿಳಿಸಿದ್ದಾರೆ.
ಹೊಸ ಆರು ಪಥದ ಹೆದ್ದಾರಿ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರದ ಅನುಭವ ನೀಡಲಿದೆ ಎಂದು ಸ್ಥಳೀಯರು ಹಾಗೂ ಪ್ರಯಾಣಿಕರು ಸಂತೋಷ ವ್ಯಕ್ತಪಡಿಸಿದ್ದಾರೆ.





