16 December 2025 | Join group

ಬೆಳ್ತಂಗಡಿ: ಲೇಡಿ ಕಂಡೆಕ್ಟರ್ ಮತ್ತು ಪ್ರಯಾಣಿಕನ ನಡುವೆ ಗಲಾಟೆ - ಪೊಲೀಸರ ಎಂಟ್ರಿ

  • 11 Oct 2025 12:04:58 PM

ಬೆಳ್ತಂಗಡಿ: ಕೆಎಸ್ಆರ್‌ಟಿಸಿ ಬಸ್‌‌ನ ಮಹಿಳಾ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಟಿಕೆಟ್ ಹಣದ ವಿಚಾರಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಪ್ರಯಾಣಿಕನ ಮೇಲೆ ಬಸ್ ನಲ್ಲೇ ಕಂಡಕ್ಟರ್ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

 

ಮೂಡಿಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಗೆ ಉಜಿರೆಯಲ್ಲಿ ಹತ್ತಿದ ಪ್ರಯಾಣಿಕ ಟಿಕೆಟ್ ಹಣ ಕೊಟ್ಟಿದ್ದೇನೆ ಅಂತ ವಾದಿಸುತ್ತಿದ್ದರೆ, ಲೇಡಿ ಕಂಡಕ್ಟರ್ ಹಣ ಕೊಟ್ಟಿಲ್ಲ ಎಂದು ವಾದಿಸುತ್ತಿದ್ದರು. ಆದರೆ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರು ಟಿಕೆಟ್ ಹಣ ಕೊಟ್ಟಿದ್ದಾರೆ ಎನ್ನುತ್ತಿದ್ದರು. ಗಲಾಟೆ ಪೊಲೀಸರ ಎಂಟ್ರಿ ತನಕ ಮುಂದುವರಿಯಿತ್ತು.

 

ಈ ವೇಳೆ ಬೆಳ್ತಂಗಡಿ ಪೊಲೀಸರು ಮದ್ಯೆ ಪ್ರವೇಶಿಸಿ, ಕಂಡಕ್ಟರ್ ಮತ್ತು ಪ್ರಯಾಣಿಕನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಬೆಳ್ತಂಗಡಿ ಟಿಸಿ ಬದಲಿ ವ್ಯವಸ್ಥೆ ಮಾಡಲಾಯಿತು.