ಕೋಲ್ಕತ್ತಾ: ಕೋಲ್ಕತ್ತಾದ ಆರ್.ಜಿ.ಕರ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದಂತದ್ದೇ ಮತ್ತೊಂದು ಘಟನೆ ನಡೆದಿದೆ. ವೈದ್ಯಕೀಯ ವಿದ್ಯಾರ್ಥಿನಿಯನ್ನು ಎಳೆದೊಯ್ದು ಆಸ್ಪತ್ರೆಯ ಆವರಣದಲ್ಲಿಯೇ ಅತ್ಯಾಚಾರವೆಸಗಿರುವ ಹೇಯ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ಅತಿದೊಡ್ಡ ಕೈಗಾರಿಕಾ ಕೇಂದ್ರವಾದ ದುರ್ಗಾಪುರದ ಶೋಭಾಪುರ ಬಳಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿನಿ ಓಡಿಶಾದ ಜಲೇಶ್ವರ ಮೂಲದವಳು. ಶೋಭಾಪುರ ಬಳಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದಳು.
ಶುಕ್ರವಾರ ರಾತ್ರಿ 8:30 ರ ಸುಮಾರಿಗೆ ವಿದ್ಯಾರ್ಥಿನಿ ಸ್ನೇಹಿತನೊಂದಿಗೆ ಕಾಲೇಜು ಕ್ಯಾಂಪಸ್ ನಿಂದ ಹೊರಬಂದಿದ್ದಳು. ಕೆಲ ಸಮಯದ ಬಳಿಕ ಹಿಂತಿರುಗಿದ್ದಳು. ಹಾಗೆ ವಾಪಸ್ ಆದ ವಿದ್ಯಾರ್ಥಿನಿಯನ್ನು ಕಾಮುಕನೊಬ್ಬ ಆಸ್ಪತ್ರೆಯ ಆವರಣದಿಂದ ಎಳೆದೊಯ್ದು ನಿರ್ಜನ ಪ್ರದೇಶದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.
ಗಂಭೀರ ಸ್ಥಿತಿಯಲ್ಲಿರುವ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವ ಓಡಿಸ್ಸಾ ಮೂಲದ ವಿದ್ಯಾರ್ಥಿಯನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಸಿದ್ದಾರೆ.





