23 October 2025 | Join group

ಆರ್.ಎಸ್.ಎಸ್ ವಿರುದ್ಧ ತಮಿಳುನಾಡಿನಲ್ಲಿ ಕೈಗೊಂಡಿರುವ ಕ್ರಮದಂತೆ ರಾಜ್ಯದಲ್ಲಿಯೂ ಕ್ರಮ: ಸಿಎಂ ಸಿದ್ದರಾಮಯ್ಯ

  • 13 Oct 2025 04:50:21 PM

ಬಾಗಲಕೋಟೆ: ಆರ್.ಎಸ್. ಎಸ್ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಅದೇ ರೀತಿ ರಾಜ್ಯದಲ್ಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್.ಎಸ್.ಎಸ್ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದರು.

 

ಸರ್ಕಾರಿ ಶಾಲೆ, ಸರ್ಕಾರಿ ಜಾಗಗಳಲ್ಲಿ ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.