23 October 2025 | Join group

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕನ ಪುತ್ರ ಆತ್ಮಹತ್ಯೆ.!

  • 14 Oct 2025 09:23:40 AM

ಉಡುಪಿ: ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ಗ್ರಾಮದ ಬಳಿ ಘಟನೆ ನಡೆದಿದೆ. ಸುದೀಪ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

 

ಹೆಬ್ರಿ ನಿವಾಸಿಯಾಗಿದ್ದ ಸುದೀಪ್ ಭಂಡಾರಿ ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.