ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆ ಸ್ಪೋಟಿಸುವುದಾಗಿ ಈಮೇಲ್ ಬೆದರಿಕೆ ಸಂದೇಶ ಒಂದು ಬಂದಿದೆ.
ಆರು ಆರ್ ಡಿ ಎಕ್ಸ್ ಫಿಕ್ಸ್ ಮಾಡಿದ್ದೇವೆ ಎಂದು arnaashinkumar@gmail.com ಎಂಬ ಇಮೇಲ್ ನಿಂದ ಬೆದರಿಕೆ ಸಂದೇಶ ಬಂದಿತ್ತು.
ತಕ್ಷಣ ಬಾಂಬ್ ಸ್ಕ್ವಾಡ್ ಸಿಎಂ, ಡಿಸಿಎಂ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದು ಹುಸಿಬಾಂಬ್ ಕರೆ ಎಂದು ಪರಿಶೀಲನೆ ನಡೆಸಿದ ತಂಡ ತಿಳಿಸಿದೆ. ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಅಶ್ವಥ್ ನಾರಾಯಣಸ್ವಾಮಿ ಎಂಬವರ ದೂರು ಆಧರಿಸಿ ಕೇಸ್ ದಾಖಲಾಗಿದೆ.