ಕಾರವಾರ : ಮೀನುಗಾರಿಕೆಗೆ ತೆರಳಿದ್ದ ವೇಳೆ ಮೀನು ಚುಚ್ಚಿ ಗಾಯಗೊಂಡಿದ್ದ ಯುವಕ ಸಾವನ್ನಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಅಕ್ಷಯ ಅನಿಲ ಮಾಜಾಳಿಕರ್ (24) ಮೃತ ದುರ್ದೈವಿ.
ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಅಕ್ಷಯ ಅನಿಲ ಮಾಜಾಳಿಕರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ಯುವಕ ಸಾವನ್ನಪ್ಪಿದ್ದಾಗಿ ಕುಟುಂಬಸ್ಥರು ಆಕ್ರೋಶ ಹೊರಹಾಕುತ್ತಿದ್ದು, ಆಸ್ಪತ್ರೆ ಆವರಣದಲ್ಲಿ ಅಕ್ಷಯ ಅನಿಲನ ಸಂಬಂಧಿಕರು ಧರಣಿ ನಡೆಸುತ್ತಿದ್ದಾರೆ.