23 October 2025 | Join group

ರಾಜ್ಯದಲ್ಲಿ ಇನ್ಮುಂದೆ 1ನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ

  • 17 Oct 2025 12:02:15 PM

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ.

 

ಹೌದು, ಸರ್ಕಾರಿ ಶಾಲೆಗಳ ಸಬಲೀಕರಣ, ದಾಖಲಾತಿ, ಕಲಿಕಾ ಗುಣಮಟ್ಟ ಮತ್ತು ಮೂಲಸೌಕರ್ಯ ಹೆಚ್ಚಿಸುವುದಕ್ಕಾಗಿ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಸೇರಿ ಗುಣಾತ್ಮಕ ಶಿಕ್ಷಣ ನೀಡುವ ಗುರಿ ಹೊಂದಲಾಗಿದೆ.

 

ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳು ಹಾಗೂ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಕೊರತೆ ನೀಗಿಸಲು 18 ಸಾವಿರ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಇಲ್ಲವೇ ಡಿಸೆಂಬರ್ ನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಿದ ನಂತರ ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ ಮಾಡಲಾಗುವುದು, ಅನುದಾನಿತ ಶಾಲೆಗಳಿಗೆ 5000 ಶಿಕ್ಷಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಸೇರಿ ಒಟ್ಟು 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಿಸಲಾಗುತ್ತದೆ ಎಂದು ಹೇಳಿದ್ದಾರೆ.