ಬೆಂಗಳೂರು: ನೈಋತ್ಯ ಮಾನ್ಸೂನ್‌ನ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜನರಿಗೆ ತಕ್ಷಣದ ಪರಿಹಾರ ನೆರವಿಗಾಗಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ₹384.40 ಕೋಟಿ ಬಿಡುಗಡೆ ಮಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅನುಮೋದನೆಯೊಂದಿಗೆ ಈ ಮೊತ್ತವನ್ನು ಎಸ್‌ಡಿಆರ್‌ಎಫ್ (State Disaster Response Fund) ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ.
2025-26ನೇ ಸಾಲಿಗೆ ಕೇಂದ್ರ ಪಾಲಿನ ಎರಡನೇ ಕಂತಿನ ಭಾಗವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಒಟ್ಟೂ ₹1,950.80 ಕೋಟಿ ರೂ.ಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕರ್ನಾಟಕಕ್ಕೆ ₹384.40 ಕೋಟಿ ಮತ್ತು ಮಹಾರಾಷ್ಟ್ರಕ್ಕೆ ₹1,566.40 ಕೋಟಿ ರೂ.ಗಳಿವೆ.
ಕೇಂದ್ರವು ಈ ವರ್ಷ ಎಸ್‌ಡಿಆರ್‌ಎಫ್ ಅಡಿಯಲ್ಲಿ 27 ರಾಜ್ಯಗಳಿಗೆ ₹13,603.20 ಕೋಟಿ ರೂ. ಮತ್ತು ಎನ್‌ಡಿಆರ್‌ಎಫ್ ಅಡಿಯಲ್ಲಿ 15 ರಾಜ್ಯಗಳಿಗೆ ₹2,189.28 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.