23 October 2025 | Join group

ಅಕ್ರಮ BPL ರೇಷನ್ ಕಾರ್ಡ್ ಪಡೆದವರಿಗೆ ದಂಡ ವಿಧಿಸಲು ಆಹಾರ ಇಲಾಖೆ ಸಿದ್ಧತೆ.!

  • 20 Oct 2025 10:42:14 AM

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್‌ ಪಡೆದವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ.

 

ಹೌದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೈಗೊಂಡಿರುವ ಅನರ್ಹ ಪಡಿತರದಾರರ ಪತ್ತೆ ಕಾರ್ಯದಲ್ಲಿ ಕಳೆದ ಕೆಲ ವಾರಗಳಲ್ಲಿ ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅವರೆಲ್ಲರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ಈ ಮೂಲಕ ರದ್ದಾದ ಅನರ್ಹ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ 4.9 ಲಕ್ಷಕ್ಕೆ ಏರಿಕೆಯಾಗಿದೆ.

 

ಈ ಅಭಿಯಾನದಲ್ಲಿ ಬಿಪಿಲ್ ಕಾರ್ಡ್‌ಗಳನ್ನು ಕಳೆದುಕೊಂಡ ಅನರ್ಹ ಫಲಾನುಭವಿಗಳಿಗೆ ಎಪಿಎಲ್ ಕಾರ್ಡ್‌ಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದು ಯೋಜನೆಯ ಫಲ ಅನುಭವಿಸಿರುವ ಫಲಾನುಭವಿಗಳಿಗೆ ದಂಡ ವಿಧಿಸಲು ಸಹ ಆಹಾರ ಇಲಾಖೆ ಚಿಂತನೆ ನಡೆಸಿದೆ. ಈ ಸಂಬಂಧ ದಂಡದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ.