23 October 2025 | Join group

ಪುತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ವೇಳೆ ನೂಕು ನುಗ್ಗಲು: 11 ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

  • 20 Oct 2025 06:26:23 PM

ಪುತ್ತೂರು: ನಗರದಲ್ಲಿ ನಡೆಯುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರ ಅಶೋಕ ಜನಮನ-2026ರ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ, ಉಸಿರುಗಟ್ಟಿ 11 ಜನರು ಅಸ್ವಸ್ಥರಾಗಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿರುವಂತ ಘಟನೆ ಪುತ್ತೂರಿನಲ್ಲಿ ನಡೆದಿದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರು ತಾಲ್ಲೂಕಿನ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಶೋಕ ಜನಮನ-2025 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಭಾರೀ ಸಂಖ್ಯೆಯ ಜನರು ಸೇರಿದ್ದರು. ಹೀಗಾಗಿ ನೂಕು ನುಗ್ಗಲು ಉಂಟಾಗಿ, ಈ ಘಟನೆ ನಡೆದಿದೆ.

 

ಕಿಕ್ಕಿರಿದು ತುಂಬಿದ್ದಂತ ಜನಸ್ತೋಮದ ಕಾರಣದಿಂದಾಗಿ ಮಕ್ಕಳು, ಮಹಿಳೆಯರು ಸೇರಿದಂತೆ 11 ಮಂದಿ ಅಸ್ವಸ್ಥರಾಗಿದ್ದಾರೆ. ಅವರನ್ನು ಪುತ್ತೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.