28 October 2025 | Join group

ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್ಐಆರ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ - ಕೋರ್ಟ್ ಆದೇಶ

  • 27 Oct 2025 07:48:46 PM

ಪುತ್ತೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್.ಎಸ್.ಎಸ್. ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಎಫ್ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ, ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶಿಸಿದೆ.

 

ಪುತ್ತೂರಿನ ಆರನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಿಂದ ಆದೇಶ ನೀಡಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ಪ್ರಶ್ನಿಸಿ ಪ್ರಭಾಕರ ಭಟ್ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪೊಲೀಸರಿಗೆ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.