28 October 2025 | Join group

ಹೈಕಮಾಂಡ್ ತೀರ್ಮಾನಿಸಿದ್ರೆ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ

  • 28 Oct 2025 08:56:02 AM

ಮಂಗಳೂರು: ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಈ ವಿಚಾರದಲ್ಲಿ ಹೈ ಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ, ಮಾಧ್ಯಮದವರು ಮುಖ್ಯಮಂತ್ರಿ ಆಗಿ ನೀವೇ ಮುಂದುವರಿಯುತ್ತಿರಾ ಎಂಬ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.

 

ಹೈಕಮಾಂಡ್ ಒಪ್ಪಿದರೆ ನಾನೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬೆಳವಣಿಗೆ ನಡುವೆಯೇ ದೆಹಲಿಗೆ ತೆರಳಿ ವಾಪಸ್ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ ಎಂದು ತಿಳಿಸಿದ್ದಾರೆ.