28 October 2025 | Join group

ಮೋಂಥಾ ಚಂಡಮಾರುತ ಎಫೆಕ್ಟ್ - ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ

  • 28 Oct 2025 08:58:40 AM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್ 29 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 

ಕಳೆದ 24 ಗಂಟೆ ಅವಧಿಯಲ್ಲಿ  ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧೆಡೆ ಮಳೆಯಾಗಿದೆ.