ಮೂಡಬಿದರೆ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಪ್ರಕರಣ ಮೂಡಬಿದ್ರೆಯ ಪಾಲಡ್ಕ ಗ್ರಾಮದ ವರ್ಣಬೆಟ್ಟ ಎಂಬಲ್ಲಿ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ಕೆರೆಕೋಡಿ ನವೀನ ಎಂಬವರ ಪತ್ನಿ ಸಂಜೀವಿನಿ (ನಯನ ನಾಯ್ಕ್) ಎಂದು ಗುರುತಿಸಲಾಗಿದೆ. ದಂಪತಿ ತನ್ನ ದನಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಆರೋಪಿ ರಾಮಮೋಹನ ನಗರದ ರಾಜೇಶ್ ನಾಯ್ಕ್ ಏಕಾಏಕಿ ಬಂದು ಸಂಜೀವಿನಿ ಎಂಬವರ ಮೇಲೆ ಹಲ್ಲೆ ನಡೆಸಿದ್ದ. ತೀವ್ರ ಸ್ವರೂಪದಲ್ಲಿ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಡಬಿದ್ರೆಯ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ನೇತೃತ್ವದ ತಂಡ ಆರೋಪಿಯ ರಾಜೇಶ್ ನಾಯ್ಕ್ ಬಂಧಿಸಿದ್ದು, ಮಂಗಳೂರಿನ ಸರಕಾರಿ ಮಾನಸಿಕ ಆಸ್ಪತ್ರೆಗೆ ದಾಖಲಿಸಿ, ಮನೋವೈದ್ಯಕೀಯ ತಪಾಸಣೆ ನಡೆಸಿ ಮುಂದಿನ ತನಿಖೆ ನಡೆಸಲಿದ್ದಾರೆ.





