ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ.
ಪಥಸಂಚಲನ ನಿರ್ಬಂಧಿಸುವ ಸಂಬಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ (Karnataka High Court) ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ನ ಧಾರವಾಡ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು.
ಇದರ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್ಗೆ ನೋಟಿಸ್ ನೀಡಿದೆ.





