29 October 2025 | Join group

ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ - ಬಾಯಿಗೆ ಮಣ್ಣು ತುರುಕಿ ಪರಾರಿ.!

  • 29 Oct 2025 09:31:50 AM

ಚಿಕ್ಕಮಗಳೂರು: ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

ಶಾಲೆ ಮುಗಿಸಿ ಮನೆಗೆ ವಾಪಸ್ ಬರುವಾಗ 25 ವರ್ಷದ ಶಿಕ್ಷಕಿ ಮೇಲೆ ಹಲ್ಲೆ ನಡೆಸಲಾಗಿದೆ. ಮರಕ್ಕೆ ಕಟ್ಟಿ ಹಾಕಿ ವಿವಸ್ತಗೊಳಿಸಿದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ ಮತ್ತು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಕೂಗಾಟ ಕೇಳಿ ಸ್ಥಳಕ್ಕೆ ಬಂದ ಮನೆಯವರು ರಕ್ಷಣೆ ಮಾಡಿದ್ದಾರೆ. ಆಗ ಆರೋಪಿಗಳು ಆಕೆಯ ಬಾಯಿಗಿ ಮಣ್ಣಾಕಿ ಅಲ್ಲಿಂದ ಪರಾರಿಯಾಗಿದ್ದಾರೆ.

 

ಮಾರಣಾಂತಿಕ ಹಲ್ಲೆಗೊಳಗಾದ ಶಿಕ್ಷಕಿಗೆ ಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಮೀಪದ ಗ್ರಾಮದ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಸದ್ಯಕ್ಕೆ ಆರೋಪಿ ಬಾಳೆಹೊನ್ನೂರು ಮೂಲದ ಭವಿತ್ (24) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆತನ ಮೊಬೈಲ್ ನಂಬರ್ ನ್ನು ಸಂತ್ರಸ್ತೆ 2 ತಿಂಗಳಿಂದ ಬ್ಲಾಕ್ ಮಾಡಿದ್ದಾಳೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಉಳಿದವರ ಬಂಧನಕ್ಕೆ 3 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.