ಬೆಂಗಳೂರು : ಬೆಂಗಳೂರಲ್ಲಿ ಕಿಡಿಗೇಡಿಗಳು ದೇಶದ್ರೋಹಿ ಕೃತ್ಯ ಎಸಗಿದ್ದು, ವೈಫೈ ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಯೂಸರ್ ನೇಮ್ ಬಳಕೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳುನಲ್ಲಿ ಈ ಘಟನೆ ನಡೆದಿದೆ. ಮೊಬೈಲ್ ವೈಫ್ ಆನ್ ಮಾಡಿದ್ರೆ ಪಾಕಿಸ್ತಾನ್ ಜಿಂದಾಬಾದ್ ಎಂದು ಯೂಸರ್ ನೇಮ್ ತೋರಿಸುತ್ತದೆ.
ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಗೆ ಭಜರಂಗದಳ ಕಾರ್ಯಕರ್ತರು ದೂರು ನೀಡಿದ್ದು, ಎನ್ ಸಿ ಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





