ಮಂಗಳೂರು: ನೆರೆ ರಾಜ್ಯಗಳಲ್ಲಿ ಅಬ್ಬರಿಸುತ್ತಿರುವ ಮೊಂತಾ ಚಂಡಮಾರುತದಿಂದ ಕರ್ನಾಟಕದ ಹವಾಮಾನದಲ್ಲಿ ಬದಲಾವಣೆಯಾಗಲಿದೆ.
ಕರಾವಳಿ ಭಾಗದಲ್ಲಿ ತೀವ್ರ ಗಾಳಿ ಬೀಸಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಣ್ಣ ಮಳೆಯ ನಿರೀಕ್ಷೆಯಿದೆ.
ಕರ್ನಾಟಕದಲ್ಲಿ ಮಳೆಯ ಪ್ರಮಾಣ ನಾಳೆ ಕಡಿಮೆಯಾಗಲಿದ್ದು, ಕರಾವಳಿ ಭಾಗದಲ್ಲಿ ಗಾಳಿಯ ಪ್ರಮಾಣ ಹೆಚ್ಚಿರಲಿದೆ.





