ಉಪ್ಪಿನಂಗಡಿ: ಇಲ್ಲಿನ ಕಂಗಿನಾರುಬೆಟ್ಟು ಪರಿಸರದಲ್ಲಿ ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯವನ್ನು ಬ್ರಿಜ್ ಬಿಳಿ ಎಸೆದಿರುವ ಕೃತ್ಯ ನಡೆದಿದ್ದು ತಕ್ಷಣ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಪ್ಪಿನಂಗಡಿ ಆಗ್ರಹಿಸಿದೆ.
ಉಪ್ಪಿನಂಗಡಿ ಠಾಣಾಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ನೀಡಿದರು.
ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಪದಾಧಿಕಾರಿಗಳು ಮತ್ತು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.





