ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಶೇರ್ ಮಾಡಿದ ಆರೋಪದಲ್ಲಿ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಶರಣ್ ಪಂಪ್ ವೆಲ್ ವಿರುದ್ಧ ಕೇಸ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗ್ದೆ ಎಂದಿದ್ದಾರೆ.
ದ್ವೇಷ ಭಾವನೆ ಮೂಡಿಸುವ ಭಾಷಣದ ತುಣುಕುಗಳನ್ನು ಶರಣ್ ಪಂಪ್ ವೆಲ್ ಶೇರ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
 
                            
 
                            



