02 November 2025 | Join group

BREAKING: ಆಂಧ್ರಪ್ರದೇಶದ ವೆಂಕಟೇಶ್ವರ ದೇವಾಲಯ ಬಳಿ ಕಾಲ್ತುಳಿತ : 9 ಭಕ್ತರು ಸಾವು

  • 01 Nov 2025 12:55:54 PM

ಅಮರಾವತಿ: ಆಂಧ್ರಪ್ರದೇಶದ ಶ್ರೀಕಾಕುಳಂ ನ ಕಾಶಿ ಬುಗ್ಗ ವೆಂಕಟೇಶ್ವರ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದ್ದು, 9 ಭಕ್ತರು ಸಾವನ್ನಪ್ಪಿದ್ದಾರೆ.

 

ಹಲವು ಭಕ್ತರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲ್ತುಳಿತ ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಏಕಾದಶಿ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.