02 November 2025 | Join group

ಕತ್ತು ಕೊಯ್ದು ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆ

  • 01 Nov 2025 02:18:12 PM

ಮೈಸೂರು : ಇಬ್ಬರು ಮಕ್ಕಳ ಕತ್ತು ಕೊಯ್ದು ಕೊಲೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.

 

ಮಹಿಳೆಯೊಬ್ಬರು ತನ್ನೆರಡು ಮಕ್ಕಳ ಕತ್ತು ಕೊಯ್ದು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ತಾಯಿಯನ್ನು ಸಂಬ್ರನ ಎಂದು ಗುರುತಿಸಲಾಗಿದೆ.

 

ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಹಿಳೆ ತನ್ನ 10 ದಿನದ ಹೆಣ್ಣು ಮಗು ಹಾಗೂ 5 ವರ್ಷದ ಹೆಣ್ಣು ಮಗುವಿನ ಕತ್ತು ಕೊಯ್ದು ಕೊಲೆ ಮಾಡಿದ್ದಾಳೆ. ಬಳಿಕ ತಾನು ಕೂಡ ಅದೇ ಚಾಕುವಿನಿಂದ ಆಕೆಯ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಬೆಟ್ಟದಪುರ ಪೊಲೀಸ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.