01 February 2026 | Join group

ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ

  • 04 Nov 2025 01:21:24 PM

ಬೆಂಗಳೂರು : ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ (79) ನಿಧನರಾಗಿದ್ದಾರೆ.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಟಿ ಅವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

 

ಅನಾರೋಗ್ಯಕ್ಕೆ ಒಳಗಾಗಿದ್ದ ಶಾಸಕ ಮೇಟಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಕೂಡ ಮೇಟಿ ಅವರ ಆರೋಗ್ಯ ವಿಚಾರಿಸಿದ್ದರು. ಚಿಕಿತ್ಸೆ ಫಲಿಸದೇ ಮೇಟಿ ಅವರು ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

 

ಹುಲ್ಲಪ್ಪ ಯಮನಪ್ಪ ಮೇಟಿ ಒಬ್ಬ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಸದಸ್ಯರಾಗಿದ್ದಾರೆ. 2013 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ , ಮೇಟಿ ಅವರು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ 68,216 ಮತಗಳನ್ನು ಪಡೆದಿದ್ದರು.