23 October 2025 | Join group

Aisa Cup 2025 ಟ್ರೋಫಿ ಸ್ವೀಕರಿಸದೇ ಸಂಭ್ರಮಿಸಿದ ಟೀಮ್ ಇಂಡಿಯಾ

  • 29 Sep 2025 09:05:44 AM

ಏಷ್ಯಾಕಪ್ ಫೈನಲ್​ನಲ್ಲಿ ಪಾಕಿಸ್ತಾನ ತಂಡವನ್ನು ಬಗ್ಗು ಬಡಿದ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಭಾರತ ತಂಡ ಏಷ್ಯಾಕಪ್ ಟ್ರೋಫಿ ಸ್ವೀಕರಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಏಷ್ಯಾಕಪ್ ಟ್ರೋಫಿ ಇಲ್ಲದೆ ಟೀಮ್ ಇಂಡಿಯಾ ಸಂಭ್ರಮಿಸಿದೆ. ಇದಕ್ಕೆ ಮುಖ್ಯ ಕಾರಣ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಪಾಕಿಸ್ತಾನದವರಾಗಿರುವುದು.

 

ಹೌದು, ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ. ಅಷ್ಟೇ ಅಲ್ಲದೆ ಪಾಕಿಸ್ತಾನ ಸರ್ಕಾರದ ಆಂತರಿಕ ವ್ಯವಹಾರಗಳ ಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿಯೇ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ಟೀಮ್ ಇಂಡಿಯಾ ನಿರಾಕರಿಸಿದೆ