ನವದೆಹಲಿ: ಏಷ್ಯಾ ಕಪ್ ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಹ್ಯಾರಿಸ್ ರೌಫ್ ಅವರನ್ನು ಐಸಿಸಿ ಅಮಾನತುಗೊಳಿಸಿದೆ. ಸೂರ್ಯಕುಮಾರ್ ಯಾದವ್ ಅವರನ್ನು ದಂಡಿಸಿದೆ.
ಪಾಕಿಸ್ತಾನದ ಕ್ರಿಕೆಟಿಗ ಹ್ಯಾರಿಸ್ ರೌಫ್ ಗೆ 2 ಪಂದ್ಯಗಳಿಗೆ ನಿಷೇಧ ಹೇರಲಾಗಿದೆ. ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ರಫೇಲ್ ಯುದ್ಧ ವಿಮಾನದ ಬಗ್ಗೆ ವ್ಯಂಗ್ಯವಾಡಿದ್ದ ಅವರಿಗೆ ಎರಡು ಪಂದ್ಯಗಳಿಗೆ ಐಸಿಸಿ ನಿಷೇಧ ಹೇರಿದೆ.
ಏಷ್ಯಾ ಕಪ್ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯಗಳಿಗೆ ಸಂಬಂಧಿಸಿದ ಅಧಿಕೃತ ವಿಚಾರಣೆಗಳ ಫಲಿತಾಂಶಗಳನ್ನು ಐಸಿಸಿ ಪ್ರಕಟಿಸುತ್ತಿದ್ದಂತೆ ಪಾಕಿಸ್ತಾನದ ಹ್ಯಾರಿಸ್ ರೌಫ್ ಅವರನ್ನು ಎರಡು ಪಂದ್ಯಗಳಿಗೆ ನಿಷೇಧಿಸಲಾಗಿದೆ ಮತ್ತು ಸೂರ್ಯಕುಮಾರ್ ಯಾದವ್ ಅವರಿಗೆ ಪಂದ್ಯ ಶುಲ್ಕದ ಮೂವತ್ತು ಪ್ರತಿಶತ ಮತ್ತು ಎರಡು ಡಿಮೆರಿಟ್ ಅಂಕಗಳನ್ನು ದಂಡಿಸಲಾಗಿದೆ.





