ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ನೆವೆಂಬರ್ 14 ರಿಂದ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತದ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಯ ಸಮಯದಲ್ಲಿ ಪಾದದ ಗಾಯಕ್ಕೆ ಒಳಗಾದ ನಂತರ ರಿಷಭ್ ಪಂತ್ ಮೊದಲ ಬಾರಿಗೆ ತಂಡಕ್ಕೆ ಮರಳಿದ್ದಾರೆ.
ಶುಬ್‌ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಆಕಾಶ್ ದೀಪ್.





