31 January 2026 | Join group

ನಾಯಕ ಶುಭಮನ್ ಗಿಲ್ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

  • 16 Nov 2025 10:46:34 AM

ಕೊಲ್ಕೊತ್ತಾ: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲ್ಕತ್ತಾ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಶುಭಮನ್ ಗಿಲ್ ಕುತ್ತಿಗೆ ನೋವಿನಿಂದ ಅರ್ಧಕ್ಕೆ ತೆರಳಿದ್ದರು. ಕುತ್ತಿಗೆ ನೋವು ಕಾಣಿಸಿಕೊಂಡ ನಂತರ ಶುಭ್‌ಮನ್ ಗಿಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಕುತ್ತಿಗೆ ಸೆಳೆತದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಾದ ನಂತರ, ಕೋಲ್ಕತ್ತಾ ಟೆಸ್ಟ್‌ನ ಉಳಿದ ಪಂದ್ಯಗಳಲ್ಲಿ ಶುಭ್‌ಮನ್ ಗಿಲ್ ಭಾಗವಹಿಸುವುದು ಅನುಮಾನವಾಗಿದೆ.