22 June 2026 |

ರೋಹಿತ್ ಶರ್ಮಾ ಮುಂದಿನ ಐಪಿಎಲ್ ಪಂದ್ಯಗಳಿಗೆ ಲಭ್ಯವೇ? ಮುಂಬೈ ಇಂಡಿಯನ್ಸ್‌ಗೆ ಗಾಯದ ಶಾಕ್!

  • 13 Apr 2026 09:10:27 PM

2026ರ ಐಪಿಎಲ್‌ನಲ್ಲಿ ಮುಂಬಯಿ ಇಂಡಿಯನ್ಸ್ ತಂಡ ಕಳಪೆ ಫಾರ್ಮ್‌ನಲ್ಲಿದೆ. ಸತತ ಸೋಲುಗಳನ್ನು ಎದುರಿಸುತ್ತಿರುವ ತಂಡಕ್ಕೆ ಇದೀಗ ಮತ್ತೊಂದು ದೊಡ್ಡ ಆಘಾತ ಎದುರಾಗುವ ಸಾಧ್ಯತೆ ಇದೆ. ತಂಡದ ಪ್ರಮುಖ ಬ್ಯಾಟ್ಸ್‌ಮನ್ ರೋಹಿತ್ ಶರ್ಮ ಗಾಯಗೊಂಡಿದ್ದಾರೆ. ಒಂದು ಕಡೆ ಹ್ಯಾಟ್ರಿಕ್ ಸೋಲು, ಮತ್ತೊಂದು ಕಡೆ ಸ್ಟಾರ್ ಆಟಗಾರರ ಗಾಯ, ಇದು ತಂಡಕ್ಕೆ ಉತ್ತಮ ಸೂಚನೆಯಲ್ಲ.

 

ನಿನ್ನೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ನಾಲ್ಕನೇ ಐಪಿಎಲ್ ಪಂದ್ಯದಲ್ಲಿ ರೋಹಿತ್ ಗಾಯಗೊಂಡರು. 19 ರನ್ ಗಳಿಸಿದ್ದ ಅವರು, ಕ್ಯಾಚ್ ಪಡೆಯಲು ಪ್ರಯತ್ನಿಸುವ ವೇಳೆ ಹ್ಯಾಮ್‌ಸ್ಟ್ರಿಂಗ್ (ಮಂಡಿರಜ್ಜು ಸ್ನಾಯು) ಭಾಗದಲ್ಲಿ ನೋವು ಕಾಣಿಸಿಕೊಂಡ ಕಾರಣ ‘ರಿಟೈರ್ಡ್' ಆಗಿ ಮೈದಾನ ತೊರೆದರು.

 

ಪಂದ್ಯದ ಬಳಿಕ ರೋಹಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸ್ಕ್ಯಾನಿಂಗ್ ನಡೆಸಲಾಗಿದ್ದು, ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ. ಸ್ಕ್ಯಾನ್ ವರದಿ ಬಂದ ಬಳಿಕವೇ ಅವರು ಮುಂದಿನ ಪಂದ್ಯದಲ್ಲಿ ಆಡಲಿರುವಾರೋ ಇಲ್ಲವೋ ಎಂಬುದು ನಿರ್ಧಾರವಾಗಲಿದೆ.

 

ಮುಂಬೈ ತಂಡ ಏಪ್ರಿಲ್ 16ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದೆ. ರೋಹಿತ್ ಚೇತರಿಸಿಕೊಳ್ಳಲು ಇನ್ನೂ ಸಮಯ ಇರುವುದರಿಂದ ಅಭಿಮಾನಿಗಳು ಉತ್ತಮ ಸುದ್ದಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

 

ಈಗಾಗಲೇ ಮೂರು ಪಂದ್ಯಗಳಲ್ಲಿ ಸೋಲು ಕಂಡಿರುವ ಮುಂಬೈ ತಂಡ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಮುಂದಿನ ಪ್ರತಿಯೊಂದು ಪಂದ್ಯವೂ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ.